ರಚನೆ : ನಿಸ್ಸಾರ್ ಅಹಮದ್

ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ
ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲಿ
ನಿತ್ಯ ಹರಿದ್ವರ್ಣ ವನದ ತೇಗ ಗಂಧ ತರುಗಳಲ್ಲಿ
ನಿತ್ಯೋತ್ಸವ ತಾಯೆ ನಿತ್ಯೋತ್ಸವ
ನಿತ್ಯೋತ್ಸವ ನಿನಗೆ ನಿತ್ಯೋತ್ಸವ
ಇತಿಹಾಸದ ಹಿಮದಲ್ಲಿನ ಸಿಂಹಾಸನ ಮಾಲೆಯಲಿ
ಗತಸಾಹಾಸ ಸಾರುತಿರುವ ಶಾಸನಗಳ ಸಾಲಿನಲಿ
ಓಲೆಗರಿಯ ಸಿರಿಗಳಲ್ಲಿ ದೇಗುಲಗಳ ಭಿತ್ತಿಗಳಲಿ
ನಿತ್ಯೋತ್ಸವ ತಾಯೆ ನಿತ್ಯೋತ್ಸವ
ನಿತ್ಯೋತ್ಸವ ನಿನಗೆ ನಿತ್ಯೋತ್ಸವ
ಒಲವೆನ್ನದ ಹಿರಿಮೆಯ ಕುಲವೆನ್ನದ ಗರಿಮೆಯ
ಸಧ್ವಿಕಾಸ ಶೀಲನುಡಿಯ ಲೋಕಾಮೃತ ಸೀಮೆಯ
ಈ ವರ್ಷದ ಈ ಹರ್ಷದ ಮನ ಉದಾರ ಮಹಿಮೆಯ
ನಿತ್ಯೋತ್ಸವ ತಾಯೆ ನಿತ್ಯೋತ್ಸವ
ನಿತ್ಯೋತ್ಸವ ನಿನಗೆ ನಿತ್ಯೋತ್ಸವ
No comments:
Post a Comment