Friday 16 September 2011

ಹೊಸಬೆಳಕು

ತೆರೆದಿದೆ ಮನ ಓ ಬಾ ಅತಿಥಿ
ಹೊಸಬೆಳಕಿನ ಹೊಸ ಗಾಳಿಯಾ ಹೊಸ ಬಾಳನು ತಾ ಅತಿಥಿ

ಆವ ರೂಪದೊಳು ಬಂದರು ಸರಿಯೇ

ಆವ ವೇಷದೊಳು ನಿಂದರು ಸರಿಯೇ
ನೀಸೆರುದಯದೊಳು ಬಹೆಯಾ ಬಾ
ತಿಂದಳನ್ದದಲಿ ಬಹೆಯಾ ಬಾ ||

ಇಂತಾದರು ಬಾ ಅಂತಾದರೂ ಬಾ

ಎಂತಾದರು ಬಾ ಬಾ ಬಾ
ಬೇಸರ ವಿದನು ಸರಿಸುವ ಹೊಸ ಬಾಳ
ಉಸಿರಾಗಿ ಬಾ ಬಾ ಬಾ ||

ಕಡಲಾಗಿ ಬಾ ಬಾನಾಗಿ ಬಾ

ಗಿರಿಯಾಗಿ ಬಾ ಕಾನಾಗಿ ಬಾ
ಕಡಲಾಗಿ ಬಾನಾಗಿ ಗಿರಿಯಾಗಿ ಕಾನಾಗಿ
ತೆರೆದಿದೆ ಮನ ಓ ಬಾ
ಹೊಸ ತಾನದ ಹೊಸ ಗಾನದ
ಹೊಸ ತಾನದ ಹೊಸ ಗಾನದ
ರಸ ಜೀವವ ತಾ ತಾ ತಾ ||





No comments:

Post a Comment