Wednesday 14 September 2011

ನಾಗರಹಾವು

ಕನ್ನಡ ನಾಡಿನ ವೀರರಮಣಿಯ
ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ
ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗೂ ಬೆಚ್ಚದ ಉಕ್ಕಿನ ಕೋಟೆ
ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗೂ ಬೆಚ್ಚದ ಉಕ್ಕಿನ ಕೋಟೆ
ಮದಿಸಿದ ಕರಿಯ ಮದವಡಗಿಸಿದ ಮದಕರಿ ನಾಯಕರಾಳಿದ ಕೋಟೆ
ಪುಣ್ಯ ಭೂಮಿಯು ಈ ಬೀಡು ಸಿದ್ದರು ಹರಸಿದ ಸಿರಿನಾಡು
ಕನ್ನಡ ನಾಡಿನ ವೀರರಮಣಿಯ
ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ

ವೀರಮದಕರಿ ಆಳುತಲಿರಲು ಹೈದಾರಾಲಿಯು ಯುಧ್ಧಕೆ ಬರಲು
ಕೋಟೆ ಜನಗಳ ರಕ್ಷಿಸುತಿರಲು ಸತತ ಧಾಳಿಯು ವ್ಯರ್ಥವಾಗಲು
ವ್ಯೆರಿ ಚಿಂತೆಯಲಿ ಬಸವಳಿದ ದಾರಿಗಾಣದೆ ಮಂಕಾದ
ಕನ್ನಡ ನಾಡಿನ ವೀರರಮಣಿಯ
ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ

ಗೂಢಚಾರರು ಅಲೆದು ಬಂದರು ಹೈದಾರಾಲಿಗೆ ವಿಷಯ ತಂದರು
ಚಿತ್ರದುರ್ಗದ ಕೋಟೆಯಲಿ ವಾಯುವ್ಯ ದಿಕ್ಕಿನೆಡೆ ನೋಡು ಎಂದರು
ಕಳ್ಳಗಂಡಿಯ ತೋರಿದರು ಲಗ್ಗೆ ಹತ್ತಲು ಹೇಳಿದರು
ಕನ್ನಡ ನಾಡಿನ ವೀರರಮಣಿಯ
ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ

ಸುತ್ತ ಮುತ್ತಲು ಕಪ್ಪು ಕತ್ತಲೆಯು ಮುತ್ತಿರಲು
ವೀರ ಕಾವಲುಗಾರ ಭೋಜನಕ್ಕೆ ನೆಡೆದಿರಲು
ಸಿಹಿನೀರ ತರಲೆಂದು ಅವನ ಸತಿ ಬಂದಿರಲು ಕಳ್ಳಗಂಡಿಯ ಹಿಂದೆ ಪಿಸುಮಾತ ಕೇಳಿದಳು
ಆಲಿಸಿದಳು ಇಣುಕಿದಳು ವೈರಿ ಪಡೆ ಕೋಟೆಯತ್ತ ಬರುವುದನ್ನು ಕಂಡಳು
ಕನ್ನಡ ನಾಡಿನ ವೀರರಮಣಿಯ
ಗಂಡು ಭೂಮಿಯ ವೀರ ನಾರಿಯ ಚರಿತೆಯ ನಾನು ಹಾಡುವೆ

ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗೂ ಬೆಚ್ಚದ ಉಕ್ಕಿನ ಕೋಟೆ
ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗೂ ಬೆಚ್ಚದ ಉಕ್ಕಿನ ಕೋಟೆ
ಚಿತ್ರದುರ್ಗದ ಕಲ್ಲಿನ ಕೋಟೆ ಸಿಡಿಲಿಗೂ ಬೆಚ್ಚದ ಉಕ್ಕಿನ ಕೋಟೆ
ಪುಣ್ಯ ಭೂಮಿಯು ಈ ಬೀಡು ಸಿದ್ದರು ಹರಸಿಯ ಸಿರಿನಾಡು
ಅಮರಳಾದಳು ಓಬವ್ವ ಅಮರಳಾದಳು ಓಬವ್ವ

No comments:

Post a Comment